×
Ad

ಮಂಗಳೂರು: ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ, ಸೆಲ್ಫಿಗೆ ಮುಗಿಬಿದ್ದ ಜನರು

Update: 2023-04-28 09:26 IST

ಮಂಗಳೂರು, ಎ.28: ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಗುರುವಾರ ಮಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ನಗರದ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದರು.

ಗುರುವಾರ ಸಂಜೆ ಉಡುಪಿಯಲ್ಲಿ ಕಾಂಗ್ರೆಸ್ ಸಮಾವೇಶ ಮುಗಿಸಿ ಮಂಗಳೂರಿಗೆ ಆಗಮಿಸಿದ ರಾಹುಲ್, ಮುಸ್ಸಂಜೆ ನಗರ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಎದುರಿನ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಆ ಬಳಿಕ ಅಲ್ಲಿಂದ ನಗರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾತ್ರಿ ವೇಳೆ ಬಿಗಿ ಭದ್ರತೆಯೊಂದಿಗೆ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ತೆರಳಿ ಐಸ್ ಕ್ರೀಮ್ ಸವಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ದ.ಕ.  ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ  ಮತ್ತಿತರರು ಜೊತೆಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸೇರಿದ ಜನರು ರಾಹುಲ್ ಗಾಂಧಿಯೊಂದಿಗೆ ಸೆಲ್ಫಿಗೆ ಮುಗಿಬಿದ್ದರು. ಇದಕ್ಕೆ ಮುಗುಳ್ನಗುತ್ತಲೇ ರಾಹುಲ್ ಕೂಡ ಸಹಕರಿಸಿದರು.

Similar News