×
Ad

ಮೋದಿ ಉಪನಾಮ ಪ್ರಕರಣ: ರಾಹುಲ್‌ ಗಾಂಧಿ ಮೇಲ್ಮನವಿ ನಾಳೆ ವಿಚಾರಣೆ

Update: 2023-04-28 10:39 IST

ಅಹಮದಾಬಾದ್: "ಮೋದಿ ಉಪನಾಮ" ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್‌ನ ನೂತನ ನ್ಯಾಯಾಧೀಶರು ಎಪ್ರಿಲ್ 29 ರಂದು ವಿಚಾರಣೆ ನಡೆಸಲಿದ್ದಾರೆ.

ಹೈಕೋರ್ಟ್ ಗುರುವಾರ ಪ್ರಕಟಿಸಿದ  ಪಟ್ಟಿಯ ಪ್ರಕಾರ ರಾಹುಲ್ ಗಾಂಧಿ ಅವರ ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಎಪ್ರಿಲ್ 29 ರಂದು ವಿಚಾರಣೆ ಮಾಡುತ್ತಾರೆ.

ಇದಕ್ಕೂ ಮುನ್ನ ಎಪ್ರಿಲ್ 26 ರಂದು ನ್ಯಾಯಮೂರ್ತಿ ಗೀತಾ ಗೋಪಿ ಅವರ ಮುಂದೆ ರಾಹುಲ್ ಗಾಂಧಿ ಪರ ವಕೀಲ ಪಿ ಎಸ್ ಚಂಪನೇರಿ ಪ್ರಕರಣವನ್ನು ಪ್ರಸ್ತಾಪಿಸಿದಾಗ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು. 

ರಾಹುಲ್ ಗಾಂಧಿ ಅವರು ಹೈಕೋರ್ಟ್‌ಗೆ ತೆರಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಗುಜರಾತ್ ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ  ಸಲ್ಲಿಸಿದ 2019 ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಮಾರ್ಚ್ 23 ರಂದು ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾಜಿ ಕಾಂಗ್ರೆಸ್ ಅಧ್ಯಕ್ಷರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

Similar News