×
Ad

ಧಮ್ಮು-ತಾಕತ್ ಇರುವ ಯಾರಾದರೂ ಬರಲಿ, ಚರ್ಚೆಗೆ ನಾನು ಸಿದ್ಧ: ಸಿದ್ದರಾಮಯ್ಯ ಸವಾಲು

Update: 2023-04-28 18:03 IST

ಬೆಂಗಳೂರು, ಎ. 28: ‘ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ನಾಯಕರಿಗೆ ನನ್ನದೊಂದು ನೇರ ಸವಾಲು. 2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ದಮ್ಮು-ತಾಕತ್ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲವೇ ಐವತ್ತಾರು ಇಂಚಿನ ಎದೆಯ ಪ್ರಧಾನಿ ಮೋದಿ ಅವರು, ಯಾರಾದರೂ ಬರಲಿ ನಾನು ಚರ್ಚೆಗೆ ಸಿದ್ಧನಿದ್ದೇನೆ. ನುಡಿದಂತೆ ನಡೆದಿರುವ ವಿಶ್ವಾಸ ನನ್ನದು, ಜನತಾ ಜನಾರ್ಧನರೇ ಇದಕ್ಕೆ ಸಾಕ್ಷಿ’ ಎಂದು ತಿಳಿಸಿದ್ದಾರೆ.

Similar News