ಹಿಂದುತ್ವವಾದಿಗಳೆಂದು ಹೇಳುವವರು ಸಿದ್ಧರಾಮಯ್ಯರ ಕ್ಷೇತ್ರದಲ್ಲಿ ಸ್ಪರ್ಧಿಸಲಿ: ಪ್ರತಾಪ್‌ಸಿಂಹ ನಾಯಕ್
ಉಡುಪಿ: ಹಿಂದುತ್ವವಾದಿಗಳೆಂದು ಹೇಳುವ ಅರುಣ್ ಪುತ್ತಿಲ, ಪ್ರಮೋದ್ ಮುತಾಲಿಕ್ ಎಲ್ಲಿ ಹೋಗಿ ಸ್ಪರ್ಧೆ ಮಾಡಬೇಕೋ ಅಲ್ಲಿ ಮಾಡುವುದಿಲ್ಲ. ಹಿಂದುತ್ವದ ಪರವಾಗಿ ಕೆಲಸ ಮಾಡುವವರ ವಿರುದ್ಧವೇ ಇವರು ಸ್ಪರ್ಧಿಸುತ್ತಿದ್ದಾರೆ. ಇದರ ಹಿಂದೆ ಅಹಂಕಾರ, ಸ್ವಾರ್ಥ ಇದೆ. ಇವರಿಗೆ ಸಿದ್ಧ ರಾಮಯ್ಯ ಅವರ ಕ್ಷೇತ್ರದಲ್ಲಿ ಹೋಗಿ ಸ್ಪರ್ಧಿಸಬಹುದಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನಿಸಿದ್ದಾರೆ.
ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅರುಣ್ ಪುತ್ತಿಲ ಬಿಜೆಪಿ ಸದಸ್ಯರೇ ಅಲ್ಲ. ಬಿಜೆಪಿಯ ಒಳಗೆ ಇದ್ದು ಅವರು ಯಾವುದೇ ಕೆಲಸ ಮಾಡಿಲ್ಲ. ಪಕ್ಷದ ಚೌಕಟ್ಟಿ ನೊಳಗೆ ಕೆಲಸ ಮಾಡಿ ಹಿಂದುತ್ವದ ಶಕ್ತಿಯನ್ನು ಗಟ್ಟಿಗೊಳಿಸಬೇಕಾಗಿರು ವುದು ನಿಜವಾದ ಹಿಂದುತ್ವ ಕಾರ್ಯ ಕರ್ತನ ಕರ್ತವ್ಯ. ಅದು ಬಿಟ್ಟು ಹೊರಗೆ ಸ್ಪರ್ಧಿಸಿದಾಗ ಅವರು ನೈತಿಕತೆ ಕಳೆದುಕೊಳ್ಳುತ್ತಾರೆ ಎಂದರು.
ಪಕ್ಷ ಗೆಲ್ಲಲು ಸಾಧ್ಯ ಇಲ್ಲದ ಸ್ಥಿತಿಯಲ್ಲಿ ಇರುವಾಗ ಹೊರಗಡೆ ಹೋಗಿ ಸ್ಪರ್ಧಿಸುವ ಮೂಲಕ ಇವರು ಹಿಂದುತ್ವಕ್ಕೆ ಸಹಾಯ ಮಾಡುತ್ತಿದ್ದಾರೆಯೇ ಅಥವಾ ಹಿಂದುತ್ವ ವಿರೋಧಿಗಳಿಗೆ ಸಹಾಯ ಮಾಡುತ್ತಿದ್ದಾರೆಯೇ ಎಂಬುದನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಪುತ್ತೂರು ಕ್ಷೇತ್ರದಲ್ಲಿ ನೇರ ಸ್ಪರ್ಧೆ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ. ಎಲ್ಲ ವಿರೋಧಗಳ ಮಧ್ಯೆ ಕೂಡ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿರುವುದು ಈ ದೇಶದ ಜನತೆಯ ಆದೇಶಕ್ಕೆ, ದೇಶದ ಗೌರವಕ್ಕೆ, ಸಂವಿಧಾನಕ್ಕೆ ಮಾಡಿರುವ ಅಪಮಾನ. ಇದು ಕಾಂಗ್ರೆಸಿನವರು ಹತಾಶೆ ಹಾಗೂ ಬೌದ್ಧಿಕ ದಿವಾಳಿತನದ ಹೇಳಿಕೆಯಾಗಿದೆಂದು ಅವರು ಆರೋಪಿಸಿದರು.
ಸೋಲುವ ಭೀತಿಯಲ್ಲಿ ಕಾಂಗ್ರೆಸ್ ಉಚಿತ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇವರಿಗೆ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ಎದುರಿಸಿದರೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದೆ. ಕಾಂಗ್ರೆಸ್ ತುಷ್ಠೀಕರಣದ ರಾಜಕಾರಣ ಮಾಡಿದರೆ ಬಿಜೆಪಿ ಸಂತುಷ್ಠಿಯ ರಾಜಕಾರಣ ಮಾಡುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ 13 ಸ್ಥಾನಗಳನ್ನು ಕೂಡ ಬಿಜೆಪಿ ಗೆಲ್ಲಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಘವೇಂದ್ರ ಕಿಣಿ, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು.