×
Ad

ಪ್ರಚಾರದ ವೇಳೆ ಮಾಜಿ ಡಿಸಿಎಮ್​ ಪರಮೇಶ್ವರ್​ ತಲೆಗೆ ಕಲ್ಲೇಟು: ಆಸ್ಪತ್ರೆಗೆ ದಾಖಲು

Update: 2023-04-28 18:32 IST

ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಅಭಿಮಾನಿಗಳು, ಕಾರ್ಯಕರ್ತರು ಜೆಸಿಬಿ ಯಂತ್ರದ ಮೂಲಕ ಹೂವು ಸುರಿಯುತ್ತಿದ್ದ ವೇಳೆ ಅದರಲ್ಲಿದ್ದ ಕಲ್ಲು ತಲೆಗೆ ಬಿದ್ದ ಪರಿಣಾಮ ಪರಮೇಶ್ವರ್‌ರವರು ಗಾಯಗೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ. 

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಭೈರೇನಹಳ್ಳಿಯಲ್ಲಿ ಪರಮೇಶ್ವರ್ ಅವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ  ಪರಮೇಶ್ವರ್ ಅವರ ತಲೆಗೆ ಗಂಭೀರ ಗಾಯಗಾಳಾಗಿದ್ದು, ತಕ್ಷಣ ಕಾರಿನಲ್ಲಿ ಪರಮೇಶ್ವರ್ ಅವರನ್ನು ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ತುಮಕೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ದಿನದಂದು ಸಹ ಕಿಡಿಗೇಡಿಗಳು ಕಲ್ಲು ಎಸೆದಿದ್ದರಿಂದ ಆ ಕಲ್ಲು ಕರ್ತವ್ಯನಿರತ ಪೊಲೀಸರಿಗೆ ಬಿದ್ದು ಗಾಯಗೊಂಡಿದ್ದರು. ಇದೀಗ ಹೂವು ಸುರಿಯುವ ಸಂದರ್ಭ ನೋಡಿಕೊಂಡೇ ಯಾರೋ ಕಿಡಿಗೇಡಿಗಳು ಹೂವಿನ ರಾಶಿಯಲ್ಲಿ ಕಲ್ಲು ಬೆರೆಸಿರಬಹುದು ಎಂದು ಕಾಂಗ್ರೆಸ್ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದ್ದಾರೆ.  

Similar News