×
Ad

ಬಳ್ಳಾರಿ ನಗರದಲ್ಲಿ ರಾಹುಲ್‍ ಗಾಂಧಿ ರೋಡ್‍ಶೋ

Update: 2023-04-28 19:53 IST

ಬಳ್ಳಾರಿ, ಎ. 28. ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಬಳ್ಳಾರಿ ನಗರ ಮತ್ತು ಗ್ರಾಮೀಣ ಅಭ್ಯರ್ಥಿಗಳ ಪರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. 

ನಗರದ ಬೆಳಗಲ್ ಕ್ರಾಸ್ ನಿಂದ ರೋಡ್ ಶೋ ಆರಂಭಿಸಿದ ರಾಹುಲ್ ಬೆಳಗಲ್ಲು ರಸ್ತೆ, ಕೌಲ್ ಬಜಾರ್ ಮೂಲಕ ಸಾಗಿದರು. ದಾರಿ ಉದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು, ರಾಹುಲ್ ಗಾಂಧಿ ಅಭಿಮಾನಿಗಳು ಸ್ವಾಗತ ಮಾಡಿದರು. ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು.

ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಬಿ.ನಾಗೇಂದ್ರ ಅವರನ್ನು ಹೆಚ್ಚಿನ ಬಹುಮತದಿಂದ ಆರಿಸಿ ತರಬೇಕೆಂದು ಮತದಾರರಲ್ಲಿ ರಾಹುಲ್ ಗಾಂಧಿಯವರು ಮನವಿ ಮಾಡಿದರು. 

Similar News