×
Ad

ಕೆ.ಆರ್.ಪುರದಲ್ಲಿ ಸಿಪಿಎಂಗೆ ಬೆಂಬಲ: ಕಣದಿಂದ ಹಿಂದಕ್ಕೆ ಸರಿದ ಜೆಡಿಎಸ್ ಅಭ್ಯರ್ಥಿ

Update: 2023-04-28 20:23 IST

ಬೆಂಗಳೂರು, ಎ.28: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ಪಕ್ಷದ ಅಭ್ಯರ್ಥಿ ನಂಜೇಗೌಡರಿಗೆ ಜೆಡಿಎಸ್ ಪಕ್ಷ ಬೆಂಬಲ ನೀಡಲು ತೀರ್ಮಾನಿಸಿದೆ. 

ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವೆಂಕಟಾಚಲಪತಿ, ಸಿಪಿಎಂ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿ, ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್‍ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ಪತ್ರ ಬರೆದಿರುವ ವೆಂಕಟಾಚಲಪತಿ, ಪಕ್ಷ ಕೈಗೊಂಡ ನಿರ್ಧಾರದಂತೆ ಕಣದಿಂದ ನಿವೃತ್ತನಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

Similar News