ಅಕ್ರಮ ಹಣ ವರ್ಗಾವಣೆ ಪ್ರಕರಣ: ಆಪ್ ನಾಯಕ ಸಿಸೋದಿಯಾಗೆ ಜಾಮೀನು ನಿರಾಕರಣೆ
Update: 2023-04-28 22:17 IST
ಹೊಸದಿಲ್ಲಿ,ಎ.27: ದಿಲ್ಲಿ ಸರಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಷ ಸಿಸೋದಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ಈ ಹಂತದಲ್ಲಿ ಸಿಸೋದಿಯಾಗೆ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ವಿಶೇಷ ನ್ಯಾಯಾಧೀಶ ಎಂ.ಕೆ ನಾಗಪಾಲ್ ಹೇಳಿದರು. ತನಿಖೆಗೆ ತನ್ನ ಕಸ್ಟಡಿಯ ಅಗತ್ಯವಿಲ್ಲ ಎಂದು ಪ್ರತಿಪಾದಿಸಿ ಸಿಸೋದಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.