ಜಗದೀಶ್ ಶೆಟ್ಟರ್ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ
Update: 2023-04-28 22:45 IST
ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ 27 ಮಂದಿ ಬಿಜೆಪಿ ಕಾರ್ಯಕರ್ತರನ್ನ ಉಚ್ಚಾಟನೆ ಮಾಡಲಾಗಿದೆ. ಹು-ಧಾ ಸೆಂಟ್ರಲ್ ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂತೋಷ್ ಚವಾಣ್ ಈ ಆದೇಶ ಹೊರಡಿಸಿದ್ದಾರೆ.
ಉಚ್ಚಾಟಿತರೆಲ್ಲರೂ ಮಾಜಿ ಮುಖ್ಯಮಂತ್ರಿ, ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರ ಆಪ್ತರೆನ್ನಲಾಗಿದ್ದು, ಪಕ್ಷದ ಅಭ್ಯರ್ಥಿ ಘೋಷಣೆಯಾಗಿದ್ದರೂ ಶೆಟ್ಟರ್ ಪರ ನಿಂತಿದ್ದ ಹಿನ್ನೆಲೆ ಮಲ್ಲಿಕಾರ್ಜುನ ಸಾಹುಕಾರ, ನಾಗೇಶ್ ಕಲಬುರಗಿ, ರಾಧಾ ಪಟ್ಟಣಶೆಟ್ಟಿ, ಮಹೇಶ್ ಪತ್ತಾರ್, ವಿರೂಪಾಕ್ಷಿ ರಾಯನಗೌಡ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿ 27 ಜನರನ್ನು 6ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.