ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ಆಮಿಷ: ಸೋಮಣ್ಣ ಸೇರಿ ಮೂವರ ವಿರುದ್ಧ FIR
Update: 2023-04-28 23:07 IST
ಚಾಮರಾಜನಗರ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸೇರಿ ಮೂವರ ವಿರುದ್ಧ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F)ರಡಿ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗೆ ಜೆಡಿಎಸ್ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.