ಪಶ್ಚಿಮ ಬಂಗಾಳದಲ್ಲಿ ಸಿಡಿಲಿಗೆ 14 ಜನರು ಬಲಿ
Update: 2023-04-28 23:16 IST
ಕೋಲ್ಕತಾ,ಎ.28: ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಗುರುವಾರ ಕನಿಷ್ಠ 14 ಜನರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಪೂರ್ವ ವರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು,ಮುರ್ಷಿದಾಬಾದ್ ಮತ್ತು ಉತ್ತರ 24 ಪರಗಣಗಳ ಜಿಲ್ಲೆಯಲ್ಲಿ ತಲಾ ಇಬ್ಬರು, ಪಶ್ಚಿಮ ಮಿಡ್ನಾಪುರ ಮತ್ತು ಹೌರಾ ಗ್ರಾಮೀಣ ಜಿಲ್ಲೆಗಳಲ್ಲಿ ತಲಾ ಮೂವರು ಸಿಡಿಲಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಮೃತರಲ್ಲಿ ಹೆಚ್ಚಿನವರು ಕೃಷಿಕರಾಗಿದ್ದು,ದುರ್ಘಟನೆ ಸಂಭವಿಸಿದಾಗ ತಮ್ಮ ಹೊಲಗಳಲ್ಲಿ ಕೆಲಸದಲ್ಲಿ ನಿರತರಾಗಿದ್ದರು ಎಂದರು.