ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2023-04-29 15:31 GMT

ಶಂಕರನಾರಾಯಣ, ಎ.29: ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಎ.21ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಂಪಾರು  ಗ್ರಾಮದ ಇರ್ಜಿ ನಿವಾಸಿ ತಾರನಾಥ ಶೆಟ್ಟಿ(65) ಎಂಬವರು ಮಣಿಪಾಲದ  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎ.27ರಂದು ರಾತ್ರಿ ವೇಳೆ ಮೃತಪಟ್ಟರು.  ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದು ಎ.28ರಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪರಶುರಾಮ(21) ಎಂಬವರು ಎ.29ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆ ಯಲ್ಲಿ ಮೃತ ಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಕುಂದಾಪುರ ಪೂರ್ಣಿಮಾ ಟಾಕೀಸ್ ಬಳಿಯ ಬೆಟ್ಟಿನಮನೆ ನಿವಾಸಿ ಗುರುರಾಜ(37) ಎಂಬವರು ಎ.29ರಂದು ಬೆಳಗ್ಗೆ ಮನೆಯ ರೂಮಿ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News