ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು
Update: 2023-04-29 21:27 IST
ಬೈಂದೂರು, ಎ.29: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.29ರಂದು ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದ ನಡೆದಿದೆ.
ಮೃತರನ್ನು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.