×
Ad

ಬಿಎಸ್ ವೈ ಸಭೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಲಿಂಗಾಯತ ಮುಖಂಡರ ಮತ್ತೊಂದು ಸಭೆ: ಶೆಟ್ಟರ್ ಗೆ ಬೆಂಬಲ ಘೋಷಣೆ

Update: 2023-05-01 00:33 IST

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ​ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಪಣತೊಟ್ಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಲಿಂಗಾಯತ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲ್ಲಿಸುವಂತೆ ಕರೆ ನೀಡಿದ್ದರು.  

ಆದರೆ, ಇದೀಗ ಬಿಜೆಪಿ ನಾಯಕರ ತಂತ್ರಕ್ಕೆ ಜಗದೀಶ್ ಶೆಟ್ಟರ್ ಪ್ರತಿತಂತ್ರ ಹೂಡಿದ್ದು, ಹುಬ್ಬಳ್ಳಿಯ ಹೋಟೆಲ್‌ ಒಂದರಲ್ಲಿ  ಲಿಂಗಾಯತ ನಾಯಕರ ಸಭೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. 

ಶೆಟ್ಟರ್ ಗೆ ಬೆಂಬಲ ಘೋಷಣೆ:

ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಜಗದೀಶ್ ಶೆಟ್ಟರ್‌, ತಮಗೆ ಬಿಜೆಪಿಯಲ್ಲಿ ಆದ ಅಪಮಾನ ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದರಿಂದ ಆ ಪಕ್ಷ ತೊರೆದಿದ್ದೇನೆ. ಇದೀಗ ಕಾಂಗ್ರೆಸ್‌ ಸೇರಿದ್ದೇನೆ. ಈ ಹಿಂದೆಯೂ ನೀವು ನನಗೆ ಬೆಂಬಲಿಸಿದ್ದೀರಿ. ಈಗಲೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸಭೆಯಲ್ಲಿದ್ದವರೆಲ್ಲರೂ ಕೈ ಎತ್ತುವ ಮೂಲಕ ಜಗದೀಶ್​ ಶೆಟ್ಟರ್‌ಗೆ ಬೆಂಬಲ ಸೂಚಿಸಿದರು.

ಇದರೊಂದಿಗೆ ತಮ್ಮನ್ನು ಸೋಲಿಸಲು ಲಿಂಗಾಯತರ ಸಭೆಯಲ್ಲಿ ಕರೆ ಕೊಟ್ಟಿದ್ದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರಿಗೆ ಜಗದೀಶ್ ಶೆಟ್ಟರ್​ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಮಾಡುವೆ: ನಟ ಶಿವರಾಜ್ ಕುಮಾರ್


 

Similar News