ಬೆಂಗಳೂರು: ಬಿಜೆಪಿ 'ಪ್ರಜಾ' ಪ್ರಣಾಳಿಕೆ ಬಿಡುಗಡೆ
Update: 2023-05-01 11:45 IST
ಬೆಂಗಳೂರು, ಮೇ 1: ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ 'ಪ್ರಜಾ' ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಗರದ ಹೊಟೇಲ್ ನಲ್ಲಿ ಜರುಗಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ 'ಪ್ರಜಾ' ಪ್ರಣಾಳಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.