ರಸ್ತೆ ಅಪಘಾತದಲ್ಲಿ ಸಬ್ ಇನ್‌ಸ್ಪೆಕ್ಟರ್ ಮೃತ್ಯು
Update: 2023-05-01 12:58 IST
ಹುಬ್ಬಳ್ಳಿ, ಮೇ.1: ಹೆಸ್ಕಾಂ ವಿಚಕ್ಷಣ ದಳದ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ (40) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಾಲೂಕಿನ ಕಿರೇಸೂರ ಗ್ರಾಮದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿಯಲ್ಲಿ ನಿನ್ನೆ(ರವಿವಾರ) ಸ್ವಗ್ರಾಮಕ್ಕೆ ತಮ್ಮ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರಿನ ನಿಯಂತ್ರಣ ಕಳೆದುಕೊಂಡಿದ್ದರಿಂದ, ಪಕ್ಕದ ತಡೆಗೋಡೆಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಅವರು 2010ನೇ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಒಬ್ಬ ಪುತ್ರ ಇದ್ದಾನೆ.