×
Ad

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

Update: 2023-05-01 18:25 IST

ಬೆಳ್ತಂಗಡಿ: ಉಜಿರೆಯ ಉದ್ಯಮಿ, ಕಾಂಗ್ರೆಸ್‌ ಮುಖಂಡ ಪ್ರವೀಣ್ ಫೆರ್ನಾಂಡಿಸ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲು ಎಸೆದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರವೀಣ್ ಫೆರ್ನಾಂಡಿಸ್ ಸೋಮವಾರ ರಾತ್ರಿ ಉಜಿರೆಯ ಮನೆಗೆ ಹೋಗುತ್ತಿದ್ದ ವೇಳೆ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಕಾರಿನ ಗಾಜು ಒಡೆದಿದೆ.

ಪ್ರವೀಣ್ ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Similar News