ಹುಬ್ಬಳ್ಳಿ: ಬಿಜೆಪಿ ಅಭ್ಯರ್ಥಿಯ ಕರಪತ್ರದಲ್ಲಿ ಜಗದೀಶ್ ಶೆಟ್ಟರ್ ಫೋಟೋ!
ಹುಬ್ಬಳ್ಳಿ: ಒಂದು ಕಡೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿಯೇ ಸಿದ್ಧ ಎಂದು ಬಿಜೆಪಿ ನಾಯಕರು ಪಣತೊಟ್ಟಿದ್ದರೆ, ಮತ್ತೊಂದು ಕಡೆ ಹುಬ್ಬಳ್ಳಿ - ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಚುನಾವಣೆಯ ಪ್ರಚಾರದ ಕರ ಪತ್ರದಲ್ಲಿ ಜಗದೀಶ್ ಶೆಟ್ಟರ್ ಅವರ ಭಾವಚಿತ್ರ ಕಾಣಿಸಿಕೊಂಡಿದೆ.
ಹುಬ್ಬಳ್ಳಿ - ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿ ಕಿರಣ್ ಅವರ ಚುನಾವಣೆಯ ಪ್ರಚಾರದ ಕರ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಕರಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫೋಟೋ ಇದ್ದು, ಇವರ ಜೊತೆಗೆ ಜಗದೀಶ್ ಶೆಟ್ಟರ್ ಫೋಟೋ ಕಾಣಿಸಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: ಬಿಎಸ್ ವೈ ಸಭೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಲಿಂಗಾಯತ ಮುಖಂಡರ ಮತ್ತೊಂದು ಸಭೆ: ಶೆಟ್ಟರ್ ಗೆ ಬೆಂಬಲ ಘೋಷಣೆ