×
Ad

ಟೆಂಪೋ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2023-05-01 21:03 IST

ಕೋಟ:  ಟೆಂಪೊ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಎ.30ರಂದು ಸಂಜೆ ವೇಳೆ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಶುಕುರ್ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಬಂದ ಟೆಂಪೋ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Similar News