ಸುಳ್ಳು ಭರವಸೆಗಳ ಬಿಜೆಪಿ ಪ್ರಣಾಳಿಕೆ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಸುಳ್ಳು ಭರವಸೆಗಳ ಪ್ರಣಾಳಿಕೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರ ನಡೆಸಿದಾಗ ನೀಡಿದ ಎಲ್ಲಾ ಭರ ವಸೆಗಳನ್ನು ಪೊರೈಸಿದ್ದು ಈ ಬಾರಿ ಕೂಡ ಅಧಿಕಾರಕ್ಕೆ ಬಂದರೆ ಜನರಿಗೆ ಉತ್ತಮ ಯೋಜನೆಯ ಗ್ಯಾರಂಟಿ ಯನ್ನು ನೀಡಿದ್ದು ಅದನ್ನು ಪೊರೈಸಲು ಬದ್ಧವಾಗಿದೆ. ಬಿಜೆಪಿಗರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿಕೊಂಡು ಬಂದಿದ್ದು ಈಗ ಪೊರೈಸಲು ಸಾಧ್ಯವಾಗದ ಸುಳ್ಳು ಭರವಸೆಗಳ ಬಿಟ್ಟಿ ಭಾಗ್ಯಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿಯ ಪ್ರಣಾಳಿಕೆ ಸಂಪೂರ್ಣ ಸುಳ್ಳಿನ ಕಂತೆಯಾಗಿದೆ. ಒಟ್ಟಾರೆ ಭರಪೂರ ಸುಳ್ಳು ಭರವಸೆಗಳನ್ನು ನೀಡಿ ಕರ್ನಾಟಕದ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಮಾಡಿದ್ದು ಮುಗ್ಧ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ ಬಿಜೆಪಿಯನ್ನು ಒದ್ದೋಡಿಸಲು ಜನ ತೀರ್ಮಾನಿಸಿದ್ದಾರೆ. ಇದು ಕೇವಲ ಚುನಾವಣೆಯ ಗಿಮಿಕ್ ಎಂದು ಅವರು ಪ್ರಕಣೆಯಲ್ಲಿ ದೂರಿದ್ದಾರೆ.