×
Ad

ತರಬೇತಿಯಿಂದ ಪರಿಣಾಮಕಾರಿ ಕರ್ತವ್ಯ ನಿರ್ವಹಿಸಲು ಸಾಧ್ಯ: ಅಶುತೋಷ್ ಗೌರ್

Update: 2023-05-02 20:12 IST

ಮಲ್ಪೆ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೂರನೇ ತಂಡದ ತರಬೇತಿಯ ಉದ್ಘಾಟನೆಯು ಇತ್ತೀಚೆಗೆ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನವ ಮಂಗಳೂರು ಬಂದರು ಮಂಡಳಿಯ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಡೆಪ್ಯುಟಿ ಕಮಾಡೆಂಟ್ ಅಶುತೋಷ್ ಗೌರ್ ಮಾತನಾಡಿ, ಯಾವುದೇ ಉದ್ಯೋಗದಲ್ಲಿ ತರಬೇತಿಯು ಅತೀ ಅಗತ್ಯ. ತರಬೇತಿಯಲ್ಲಿ ಇಲಾಖೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಹಕಾರವಾಗು ತ್ತದೆ. ಈ ಬಗ್ಗೆ ಸಿಐಎಸ್‌ಎಫ್ ವತಿಯಿಂದ ತರಬೇತಿಗೆ ಸಹಕಾರ ನೀಡಲಾಗುವುದು ಎಂದರು.

ಉಡುಪಿ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಪೊಲೀಸ್ ಇಲಾಖೆ ಯಲ್ಲಿ ಕರ್ತವ್ಯ ನಿರ್ವಹಿಸಲು ದೈಹಿಕವಾಗಿ ಸದೃಢವಾಗಿರುವುದು ಅತೀ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಮ್ಮ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಈ ತರಬೇತಿಯು ಇನ್ನಷ್ಟು ಸಹಕಾರಿಯಾಗ ಲಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ವಹಿಸಿದ್ದರು. ತರಬೇತಿ ಸಂಸ್ಥೆಯ ಉಪಪ್ರಾಂಶುಪಾಲ ಹಾಗೂ ಡಿವೈಎಸ್ಪಿ ಟಿ.ಎಸ್.ಸುಲ್ಫಿ ಸ್ವಾಗತಿಸಿದರು. ಕ್ರೈಂ ವಿಭಾಗದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ವಂದಿಸಿದರು. ಪಿಎಸ್ಸೈ ಮನಮೋಹನ ಕಾರ್ಯಕ್ರಮ ನಿರೂಪಿಸಿ ದರು. 

Similar News