×
Ad

ಮೇ 3ರಂದು ಸಾರಿಗೆ ಸಂಚಾರದಲ್ಲಿ ವ್ಯತ್ಯಯ

Update: 2023-05-02 20:22 IST

ಉಡುಪಿ: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯ ಕ್ರಮಕ್ಕೆ ನಿಯೋಜಿ ಸಲಾಗಿರುವುದರಿಂದ, ಈ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಕ.ರಾ.ರ.ಸಾ. ನಿಗಮದೊಂದಿಗೆ ಸಹಕರಿ ಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Similar News