ಕಲಬುರಗಿ ನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ
Update: 2023-05-02 22:40 IST
ಕಲಬುರಗಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಯಲ್ಲಿ ಮಂಗಳವಾರ ಸಂಜೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದ ಹುಮನಾಬಾದ್ ರಿಂಗ್ ರೋಡ್ ಮಾರ್ಗವಾಗಿ ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಸಿಂಧನೂರಿನಿಂದ ಹೆಲಿಪ್ಯಾಡ್ ಮೂಲಕ ನಗರಕ್ಕೆ ಆಗಮಿಸಿ ಕೆಎಂಎಫ್ ನಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಆರು ಕಿಮೀ ವರಗೆ ರೋಡ್ ಶೋ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಪ್ರಧಾನಿಗೆ ಕಲಬುರಗಿ ಲೋಕಸಭಾ ಸದಸ್ಯ ಡಾ, ಉಮೇಶ್ ಜಾಧವ್ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಅವರು ತೆರೆದ ವಾಹನದಲ್ಲಿ ಸಂಚರಿಸಿ ಜೊತೆಗೆ ಇದ್ದರು.
ಬೃಹತ್ ರೋಡ್ ಶೋ ನಲ್ಲಿ ಕಲಬುರಗಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಸೇರಿದಂತೆ ಅಪಾರ ಕಾರ್ಯಕರ್ತರು ರೋಡ್ ಶೋ ನಲ್ಲಿ ಭಾಗವಹಿಸಿ ಮೋದಿ ಕಡೆಗೆ ಕೈ ಬಿಸಿ ಅಭಿನಂದಿಸಿದರು.