ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ

Update: 2023-05-03 06:40 GMT

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಲ್ಲಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. 

ಮೋದಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. 

ನಿನ್ನೆ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದ ಮೋದಿ ಅವರು ಬೆಳಗ್ಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ್ದಾರೆ. 

ಇದನ್ನೂ ಓದಿ: ಮೋದಿ ಮುಲ್ಕಿಗೆ ಭೇಟಿ: ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Similar News