×
Ad

ಚಿತ್ತಾಪುರದಲ್ಲಿ ಮೇ 6ರ ಮೋದಿ ಕಾರ್ಯಕ್ರಮ ರದ್ದು

ಕಳ್ಳತನದ ಆರೋಪ ಎದುರಿಸುತ್ತಿರುವ BJP ಅಭ್ಯರ್ಥಿ

Update: 2023-05-03 11:55 IST

ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 6ರಂದು (ಶನಿವಾರ) ನಡೆಸಲು ಉದ್ದೇಶಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರು ತಿಳಿಸಿದ್ದಾರೆ.

ಅಕ್ಕಿ ಅಕ್ರಮ ಸಾಗಾಣಿಕೆಯ ಆರೋಪ ಸೇರಿ ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಣಿಕಂಠ ರಾಠೋಡಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈಗ ಪ್ರಧಾನಿ ಮೋದಿ ಕಲಬುರಗಿಗೆ ಚುನಾವಣಾ ಪ್ರಚಾರಕ್ಕೆ ಬರುವ ಹೊತ್ತಿಗೇ ಮಣಿಕಂಠ ರಾಥೋಡ್ ಕೈಯಲ್ಲಿ ಪಿಸ್ತೂಲು ಹಿಡಿದುಕೊಂಡು ಪೋಸ್ ನೀಡುತ್ತಿರುವ ವಿಡಿಯೋ ವೊಂದು ವೈರಲ್ ಆಗಿರುವುದು ​ಬಿಜೆಪಿಗೆ ಮುಜುಗರ ಸೃಷ್ಟಿಸಿತ್ತು.

ಮಣಿಕಂಠ ಪರ ಪ್ರಚಾರಕ್ಕೆ ಪ್ರಧಾನಿ ಅವರನ್ನು ಕರೆಸಿದರೆ ಪಕ್ಷಕ್ಕೆ ಮುಜುಗರವಾಗಬಹುದು ಎಂಬ ಆತಂಕದಿಂದ ಸಭೆಯನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಿತ್ತಾಪುರ ಕ್ಷೇತ್ರ: ರೌಡಿಶೀಟರ್‌ ಮಣಿಕಂಠ ರಾಠೋಡಗೆ ಬಿಜೆಪಿ ಟಿಕೆಟ್

Similar News