×
Ad

ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಭಾವಚಿತ್ರ ತೆಗೆಯಲ್ಲ: ಜಗದೀಶ್ ಶೆಟ್ಟರ್

Update: 2023-05-03 17:28 IST

ಹುಬ್ಬಳ್ಳಿ: 'ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ತೆಗೆಯುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ,  ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,  ''ನನ್ನ ಕಚೇರಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೊ ಇರುವುದರಲ್ಲಿ ಆಶ್ಚರ್ಯಪಡುವಂತದ್ದೇನಿದೆ ? ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ'' ಎಂದು ಹೇಳಿದರು. 

''ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಎಂದು ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ'' ಎಂದು ಸ್ಪಷ್ಟಪಡಿಸಿದರು. 

ಇದನ್ನೂ ಓದಿಸಿನೆಮಾ ಪೋಸ್ಟರ್ ಗಳಲ್ಲಿ ಜಗ್ಗೇಶ್ ಮುಖ ಮುಚ್ಚಿದ ಚುನಾವಣಾ ಅಧಿಕಾರಿಗಳು

Similar News