ಉಡುಪಿ: ಮೇ 9, 10ರಂದು ಸಾರಿಗೆ ಬಸ್‌ಗಳ ವ್ಯತ್ಯಯ
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ
Update: 2023-05-03 19:19 IST
ಉಡುಪಿ, ಮೇ 3: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಜಿಲ್ಲೆಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿ ಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.