×
Ad

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

Update: 2023-05-03 19:45 IST

ಉಡುಪಿ, ಮೇ 3: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಪರವಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪಮೊಲಿ ಇಂದು ಉಡುಪಿಯ ಎಲ್‌ಐಸಿ ಮತ್ತು ವಿವಿಧ ಬ್ಯಾಂಕ್‌ಗಳಿಗೆ ತೆರಳಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು. ಮಣಿಪಾಲದಲ್ಲಿ ಮತಯಾಚನೆ: ರಿಕ್ಷಾ ಚಾಲಕರಿಗಿಂದು ಒಂದು ಹೊತ್ತಿನ ಊಟಕ್ಕೂ ಕಷ್ಟಪಡು ವಂತಾಗಿದೆ. ಪೆಟ್ರೋಲ್, ಡೀಸೆಲ್, ಆಟೋ ರಿಕ್ಷಾದ ಮೇಲಿನ ಬೆಲೆ ಏರಿಕೆ, ಇನ್ಶುರೆನ್ಸ್, ತೆರಿಗೆಗಳು ಐದು ಪಟ್ಟು ಹೆಚ್ಚಾಗಿದೆ. ಬಡವರಿಗೆ ಬೆಂಗಾವಲಾಗಿ ಇರುವ ಪಕ್ಷ ಕಾಂಗ್ರೆಸ್ ಎಂದು ಉಡುಪಿ ಜಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಹೇಳಿದ್ದಾರೆ.

ಮಣಿಪಾಲ ಆಟೋ ನಿಲ್ದಾಣದ ಬಳಿ ಇಂದು ಆಟೋ ರಿಕ್ಷಾ ಚಾಲಕ ರೊಂದಿಗೆ ಮತ ಯಾಚಿಸಿ ಅವರು ಮಾತನಾಡುತಿದ್ದರು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಇಂದ್ರಾಳಿ 192 ರ ಬೂತ್ ಅಧ್ಯಕ್ಷ ರಾಘವೇಂದ್ರ ನಾಯಕ್ ಇಂದ್ರಾಳಿ, ರಿಕ್ಷಾ ಚಾಲಕರು ಮೊದಲಾದವರು ಉಪಸ್ಥಿತರಿದ್ದರು.

Similar News