×
Ad

ಉಚ್ಚಿಲ: 300ಕ್ಕೂ ಅಧಿಕ ಮೀನುಗಾರರು ಕಾಂಗ್ರೆಸ್ ಸೇರ್ಪಡೆ

Update: 2023-05-03 19:52 IST

ಕಾಪು, ಮೇ 3: ಕಡಲತಡಿಯ ಈ ಭಾಗದಲ್ಲಿ ಮೀನುಗಾರರು ಬಹಳಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮೊಗವೀರರನ್ನು ಕೇವಲ ಓಟ್ ಬ್ಯಾಂಕ್ ಆಗಿ ನಡೆಸಿಕೊಂಡ ಬಿಜೆಪಿ ಸರಕಾರ ಬಹಳಷ್ಟು ಸೌಲಭ್ಯದಿಂದ ವಂಚಿತ ರನ್ನಾಗಿ ಮಾಡಿದೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಉಚ್ಚಿಲ ಬಡಾ ಗ್ರಾಮದಲ್ಲಿ ಕರಾವಳಿ ಭಾಗದ 300ಕ್ಕೂ ಅಧಿಕ ಮೀನುಗಾರರ ಮುಖಂಡರು ಹಾಗೂ ಯುವಕ ಯುವತಿಯರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕರಾವಳಿ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಈ ಬಾರಿ ವಿಶೇಷ ಅನುದಾನ ವನ್ನು, ವಿಶೇಷ ಪ್ರಣಾಳಿಕೆಯನ್ನು ಜಾರಿ ಮಾಡುವ ಪ್ರಾಮಾಣಿಕ ಭರವಸೆಯನ್ನು ನೀಡಿದೆ. ಭರಪೂರ ಕೊಡುಗೆಯನ್ನು ಕಾಂಗ್ರೆಸ್ ಈ ಬಾರಿ ಕರಾವಳಿ ಭಾಗಕ್ಕೆ ನೀಡುವ ವಾಗ್ದಾನವನ್ನು ಮಾಡಿದೆ. ಅದರ ಸಂಪೂರ್ಣ ಜವಾಬ್ದಾರಿ ನನ್ನ ಹೆಗಲ ಮೇಲಿದೆ ಎಂದರು.

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್, ದೀಪಕ್ ಎರ್ಮಾಳ್, ತಾಪಂ ಮಾಜಿ ಉಪಾಧ್ಯಕ್ಷ ಶೇಖಬ್ಬ ನೇತೃತ್ವದಲ್ಲಿ ಮೊಗವೀರ ಮುಖಂಡರಾದ ಸುಕುಮಾರ್ ಬಂಗೇರ, ರೂಪೇಶ್ ಮೆಂಡನ್, ಜೀವನ್ ಮೆಂಡನ್, ಆನಂದ್ ತಿಂಗಳಾಯ, ಅನಿಶ್, ಯಶ್ವಂತ್ ಬಂಗೇರ, ಉಮೇಶ್ ಪೂಜಾರಿ, ದಯಾನಂದ ಕೋಟ್ಯಾನ್, ಶಿವಣ್ಣ ಬಂಗೇರ, ಲಕ್ಷ್ಮಣ್ ಗುರಿಕಾರ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆಯಾದರು.

Similar News