×
Ad

ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ: ಯಶ್‌ಪಾಲ್ ಸುವರ್ಣ

Update: 2023-05-03 19:56 IST

ಮಣಿಪಾಲ, ಮೇ 3: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ. ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ  ಇಂದು ಭೇಟಿ ನೀಡಿ ಕಾರ್ಮಿಕರಲ್ಲಿ ಮತಯಾಚನೆ ಮಾಡಿ ಅವರು ಮಾತನಾಡುತಿದ್ದರು.

ಶಾಸಕ ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ಕಲ್ಪನಾ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್, ಡಾ.ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Similar News