ಮೇ 4ರಿಂದ ಮನಪಾ ವ್ಯಾಪ್ತಿಯಲ್ಲಿ ರೇಷನಿಂಗ್ ಮೂಲಕ ನೀರು ಸರಬರಾಜು
Update: 2023-05-03 21:04 IST
ಮಂಗಳೂರು, ಮೇ 3: ನೇತ್ರಾವತಿ ನದಿಯ ನೀರಿನ ಒಳಹರಿವು ನಿಂತಿರುವುದರಿಂದ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಹಾಗಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4ರಿಂದಲೇ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಎಂದು ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ಭಾಗಕ್ಕೆ ಪರ್ಯಾಯ ದಿನಗಳಲ್ಲಿ ನೀರು ಪೂರೈಸಲು ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹಾಗಾಗಿ ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್‌ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸಲಾಗುತ್ತದೆ.
ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು ಎಂದು ತಿಳಿಸಿದ್ದಾರೆ.