ಪುತ್ತೂರು: ಮಾಡಾವಿನ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ
Update: 2023-05-04 14:59 IST
ಪುತ್ತೂರು, ಮೇ 4: ಪುತ್ತೂರು ಮೂಲದ ಅವಿವಾಹಿತ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸ್ಥಾನತ್ತಾರು ಚಂದ್ರಶೇಖರ ರೈ ಎಂಬವರ ಪುತ್ರಿ ಶೃತಿ(22) ಮೃತಪಟ್ಟವರು.
ಕಳೆದೆರಡು ವರ್ಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಶೃತಿ ಅಲ್ಲೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು.
ಬಾಡಿಗೆ ರೂಮಿನಲ್ಲಿದ್ದ ಅವರು ಎ.29ರಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಎ.30ರಂದು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.