ಮೇ 5 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ
Update: 2023-05-04 20:05 IST
ಬೆಂಗಳೂರು, ಮೇ 4: ಬುದ್ಧ ಪೂರ್ಣಿಮೆ ಪ್ರಯುಕ್ತ ನಾಳೆ(ಮೇ 5) ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಮಾಂಸದ ಅಂಗಡಿಯ ಪರವಾನಗಿ ರದ್ದು ಪಡಿಸಲಾಗುತ್ತದೆ. ಅಲ್ಲದೇ ಸರಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟನೆಯಲ್ಲಿತಿಳಿಸಿದ್ದಾರೆ.