×
Ad

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-05-04 20:55 IST

ಮಂಗಳೂರು: ನಗರದ ಬಂದರು ಮತ್ತು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 12 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮತ್ತು 2019ರ ಡಿಸೆಂಬರ್‌ನಲ್ಲಿ ನಡೆದ ಸಿಎಎ/ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಕಸಾಯಿಗಲ್ಲಿಯ ಮುಹಮ್ಮದ್ ರಿಯಾಝ್ ಯಾನೆ ರೀಮಾ (28) ಎಂಬಾತನನ್ನು ಬಂದರ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆರೋಪಿಯು ಘಟನೆ ನಡೆದ ಬಳಿಕ ವಿದೇಶಕ್ಕೆ ತೆರಳಿದ್ದ. ಗುರುವಾರ ದುಬೈಯಿಂದ ಆಗಮಿಸುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ವಿಮಾನ ನಿಲ್ದಾಣದಿಂದಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Similar News