×
Ad

ಮೇ 5: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

Update: 2023-05-04 21:43 IST

ಮಂಗಳೂರು, ಮೇ 5: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ಪೃಥ್ವಿರಾಜ್ ಚವಾಣ್ ಮೇ 5ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 10ಕ್ಕೆ ಕಾಂಗ್ರೆಸ್ ಭವನದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರ ಜೊತೆ ಸಂವಾದ ನಡೆಸಲಿದ್ದಾರೆ. ಸಂಜೆ 5ಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾವೂರು ಜಂಕ್ಷನ್‌ನಲ್ಲಿ ಮತ್ತು ಸಂಜೆ 7ಕ್ಕೆ ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಜನಾಡಿಯಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News