×
Ad

ಸಿದ್ದರಾಮಯ್ಯರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ: ವರುಣಾದಲ್ಲಿ ನಟಿ ರಮ್ಯಾ

Update: 2023-05-04 23:11 IST

ಮೈಸೂರು: ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರ ನಟಿ ಹಾಗೂ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ಪ್ರಚಾರ ಮಾಡಿದರು.

ವಿರೋಧ ಪಕ್ಷದ ನಾಯಕ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರ ಪರಪ್ರಚಾರ ನಡೆಸಿ ''ಸಿದ್ದರಾಮಯ್ಯ ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ವರುಣಾ ವಿಧಾನಸಭೆ ಕ್ಷೇತ್ರದ ಕೆಂಪಿಸಿದ್ದನಹುಂಡಿ, ಹುಳಿಮಾವು ಹಾಗೂ ಹದಿನಾರು ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಜೊತೆ ನಟಿ ರಮ್ಯಾ ರೋಡ್ ಶೋ ನಡೆಸಿ ಮತ ಯಾಚಿಸಿದರು. 

ಇದೇ ವೇಳೆ ಮಾಜಿ ಸಚಿವ  ಎಂ.ಆರ್.ಸೀತಾರಾಂ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷ ರಾಮಯ್ಯ ಅವರು ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದರು.

Similar News