ಬೆಂಗಳೂರು, ಮೈಸೂರಿನ ವಿವಿಧೆಡೆ ಐಟಿ ದಾಳಿ ವೇಳೆ 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆದ ಅಧಿಕಾರಿಗಳು

Update: 2023-05-06 09:59 GMT

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ​ಹಣ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರುಗಳು ಬಂದ ಹಿನ್ನೆಲೆಯಲ್ಲಿ  ನಿನ್ನೆ ಏಕಕಾಲದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು 15 ಕೋಟಿಗೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಆರ್ ಎಂವಿ ಬಡಾವಣೆ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್, ಸೇರಿ ಹಲವು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. 

Similar News