ವಿಧಾನಸಭೆ ಚುನಾವಣೆ: ಮೇ 9 ಮತ್ತು 10 ರಂದು ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Update: 2023-05-06 10:30 GMT

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (ಕೆಎಸ್ಸಾರ್ಟಿಸಿ) ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಚುನಾವಣೆ ಕಾರ್ಯದ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ನಿಯೋಜಿಸಲಾಗಿದೆ. ಆದ್ದರಿಂದ ಮೇ 9 ಮತ್ತು 10ರಂದು ನಿಗಮದ ವಾಹನಗಳ ಕಾರ್ಯಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಕೆಎಸ್ಸಾರ್ಟಿಸಿ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ.

Similar News