ಬೇಲೂರು: ಪತಿ ಸಾವಿನ ಬೆನ್ನಲ್ಲೇ ಹೃದಯಾಘಾತದಿಂದ ಪತ್ನಿ ಮೃತ್ಯು
Update: 2023-05-06 20:26 IST
ಬೇಲೂರು: ಪತಿಯ ಸಾವಿನಿಂದ ಆಘಾತಗೊಂಡ ಪತ್ನಿಯೂ ಸಹ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಮದಘಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುವಳಲು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ಮೃತ ದಂಪತಿಯನ್ನು ರವೀಶ್ (39) ಹಾಗೂ ಪ್ರಮೀಳಾ (32)ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದ ರವೀಶ್ ನ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.
ತಂದೆ-ತಾಯಿಯನ್ನು ಕಳೆದುಕೊಂಡ ದಂಪತಿಯ ಇಬ್ಬರು ಮಕ್ಕಳ ಆಕ್ರಂದನ ಮುಗಿಲುಮುಟ್ಟಿತ್ತು.