ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
Update: 2023-05-06 21:30 IST
ಕಾಪು, ಮೇ 6: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ನವೀನ ಆಚಾರ್ಯ (41) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 5ರಂದು ಅಪರಾಹ್ನ ಮನೆಯ ಮಲಗುವ ಕೋಣೆಯ ತಾರಸಿಯ ಕಬ್ಬಿಣದ ಕೊಂಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಕೆಲಸದ ಒತ್ತಡದಲ್ಲಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಯಡ್ತಾಡಿಯ ಕೃಷ್ಣ ನಾಯ್ಕ್ ಎಂಬವರ ಮಗ ಗಿರೀಶ ನಾಯ್ಕ್ (26) ಎಂಬವರು ಮೇ 5ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.