ನಾಳೆ (ಮೇ 8) ಎಸೆಸೆಲ್ಸಿ ಫಲಿತಾಂಶ ಪ್ರಕಟ

Update: 2023-05-07 10:25 GMT

ಬೆಂಗಳೂರು, ಮೇ 7: ಪ್ರಸಕ್ತ (2022-23) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 8ರಂದು ಪ್ರಕಟಗೊಳ್ಳಲಿದೆ.

ಸೋಮವಾರ ಪೂರ್ವಾಹ್ನ 11 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ.

ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ.

Similar News