×
Ad

ಆರ್ ಆರ್ ನಗರದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಪ್ರಕರಣ: 11 ಜನರ ವಿರುದ್ಧ ಪ್ರಕರಣ

Update: 2023-05-07 18:25 IST

ಬೆಂಗಳೂರು, ಮೇ 7: ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಸದಸ್ಯ ಜಿ.ಕೆ.ವೆಂಕಟೇಶ್ ಸೇರಿ 11 ಜನರ ವಿರುದ್ಧ ಇಲ್ಲಿನ ಯಶವಂತಪುರ  ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ನೀಡಿದ್ದ ದೂರಿನ್ವಯ ಐಪಿಸಿ ಸೆಕ್ಷನ್ 354, 341, 149, 392, 323ರಡಿ ಪ್ರಕರಣ ದಾಖಲಾಗಿದೆ.

ಶನಿವಾರ ಸಂಜೆ ಯಶವಂತಪುರ ವಾರ್ಡ್‍ನಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಚಾರಕ್ಕೆ ಜಿ.ಕೆ.ವೆಂಕಟೇಶ್ ಮತ್ತು ಬಿಎಜಪಿ ಬೆಂಬಲಿಗರು ಅಡ್ಡಿಪಡಿಸಿ ಹಲ್ಲೆ ಮಾಡಿ ಕಾರ್ಯಕರ್ತೆಯರಿಗೆ ನಿಂದಿಸಿ ಚಿನ್ನದ ಸರ, ಮೊಬೈಲ್ ಕಸಿದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.

Similar News