×
Ad

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಕಮರಿಗೆ ಬಿದ್ದ ಬಿಎಸ್ ಎಫ್ ವಾಹನ: ಓರ್ವ ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Update: 2023-05-08 10:16 IST

ಪೂಂಚ್(ಜಮ್ಮು): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್) ಸೇರಿದ  ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಬಿಎಸ್‌ಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಹಾಗೂ  ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ.

ಮೆಂಧರ್‌ನ ಬಲ್ನೋಯಿ ಪ್ರದೇಶದ ಗುಡ್ಡಗಾಡು ರಸ್ತೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಾಹನದ ಚಾಲಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಲಾಯಿತು ಹಾಗೂ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ತೀವ್ರವಾಗಿ ಗಾಯಗೊಂಡ ಬಿಎಸ್ಎಫ್ ಸಿಬ್ಬಂದಿಯೊಬ್ಬರು ಮೃತಪಟ್ಟರು ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News