×
Ad

ತಿಹಾರ್ ಜೈಲಿನಲ್ಲಿ ದರೋಡೆಕೋರನ ಹತ್ಯೆ, ತಮಿಳುನಾಡಿನ 7 ಪೊಲೀಸರ ಅಮಾನತು: ವರದಿ

Update: 2023-05-08 12:09 IST

ಹೊಸದಿಲ್ಲಿ: ದರೋಡೆಕೋರ ತಿಲ್ಲು ತಾಜ್‌ಪುರಿಯನನ್ನು ಇರಿದು ಹತ್ಯೆಗೈದ ಸಂದರ್ಭದಲ್ಲಿ ತಿಹಾರ್ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ)ಯ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಘಟನೆಯ ಸಮಯದಲ್ಲಿ,  ಮೂಕಪ್ರೇಕ್ಷಕರಾಗಿ ನಿಂತ ಆರೋಪದ ಮೇಲೆ ಅವರನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ ಎಂದು ಜೈಲು ಅಧಿಕಾರಿಗಳು ರವಿವಾರ ಹೇಳಿದರು.

ದಿಲ್ಲಿ ಕಾರಾಗೃಹಗಳ ಮಹಾನಿರ್ದೇಶಕ ಸಂಜಯ್ ಬೇನಿವಾಲ್ ತನ್ನ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಪೊಲೀಸರಿಗೆ ಪತ್ರ ಬರೆದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ತಮ್ಮ ಸಿಬ್ಬಂದಿಯ ಕಡೆಯಿಂದ ಆಪಾದಿತ ನಿರ್ಲಕ್ಷ್ಯದ ಬಗ್ಗೆ ಟಿಎನ್‌ಎಸ್‌ಪಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅವರು ತಮ್ಮ ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ತಮಿಳುನಾಡು ಪೊಲೀಸರು ಈಗ ತನ್ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ ಮತ್ತು ಅವರನ್ನು ಹಿಂದಕ್ಕೆ ಕರೆಸಿಕೊಂಡಿದ್ದಾರೆ" ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Similar News