×
Ad

ಇಂದು ಬಹಿರಂಗ ಪ್ರಚಾರಕ್ಕೆ ತೆರೆ | ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ

Update: 2023-05-08 14:10 IST

ಬೆಂಗಳೂರು: ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯ ವಿಧಾಸನಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. 

ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕೊನೆಯ ಕ್ಷಣದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನ ವಿಜಯನಗರದಲ್ಲಿ ರೋಡ್ ಶೋ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಗೋವಿಂದರಾಜನಗರ ಕ್ಷೇತ್ರದ  ಪ್ರಿಯಾ ಕೃಷ್ಣ ಅವರ ಜೊತೆಗಿದ್ದರು. 

ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ವಿವಿಧೆಡೆಗಳಲ್ಲಿ ಮತಯಾಚನೆ ಮಾಡುತ್ತಿದ್ದಾರೆ. 

Similar News