ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ರೋಡ್ ಶೋ
ಕೋಲಾರ, ಮೇ. 08 : ಚುನಾವಣೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಅಬ್ಬರದ ರೋಡ್ ಶೋ ನಡೆಸಿದರು.
ಸೋಮವಾರ ಬೆಳಿಗ್ಗೆ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತೆರದ ವಾಹನದಲ್ಲಿ ಮೆರವಣಿಗೆ ಪ್ರಾರಂಭ ಮಾಡಿದರು.
ಎಂ.ಜಿ.ರಸ್ತೆಯ ಗಾಂಧೀವನ ಚಂಪಕ್ ವೃತ್ತ, ದೊಡ್ಡಪೇಟೆ, ಶಾರದ ಚಿತ್ರಮಂದಿರ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಅಮ್ಮವಾರಿ ಪೇಟೆಗಳಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ಮತಯಾಚಿಸಿದರು.
ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಹಾಗೂ ಎಂ.ಎಲ್.ಅನಿಲ್ ಕುಮಾರ್ ರವರು ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ರವರಿಗೆ ಮತ ನೀಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ರೋಡ್ ಶೋ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಹಿರಿಯ ಮುಖಂಡರಾದ ಸಿ.ಎಂ. ಮುನಿಯಪ್ಪ, ಆಲಂಗೂರು ಶಿವಣ್ಣ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ನಗರಸಭೆ ಸದಸ್ಯರಾದ ಸೋಮಶೇಖರ್, ಅಂಬರೀಶ್, ಮುನಿಆಂಜಿನಪ್ಪ, ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ಚಂಜಿಮಲೆ ರಮೇಶ್, ಗಂಗಮ್ಮನಪಾಳ್ಯ ರಾಮಯ್ಯ ಸಙರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.