ತಲಪಾಡಿ ಫಲಾಹ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97.87 ಫಲಿತಾಂಶ

Update: 2023-05-08 17:00 GMT

ಮಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್/ ಎಪ್ರಿಲ್ ತಿಂಗಳಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ  ಫಲಾಹ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ 97.87 ಫಲಿತಾಂಶವನ್ನು ದಾಖಲಿಸಿದೆ. 47 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 46 ಮಂದಿ ಉತ್ತೀರ್ಣರಾಗಿದ್ದಾರೆ.

ಫಲಿತಾಂಶದಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 34 ವಿದ್ಯಾರ್ಥಿಗಳು ಪ್ರಥಮ ದರ್ಜೆ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 1 ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.

ಖದೀಜ ನಸೀಹ (573-91.68%) , ಆಯಿಶತು ರಿಲ (569-91.04%), ಮೊಹಮ್ಮದ್ ಜಾಝೀಬ್ ಹುಸೈನ್ (569-91.04%), ಹಲೀಮಾ ಶಝಾ (564-90.24%) ಮತ್ತು ಅಹಮದ್ ಫಯಾಝ್ (560- 89.6%) ಅತ್ಯುತ್ತಮ ಅಂಕಗಳನ್ನು ಗಳಿಸಿರುತ್ತಾರೆ ಎಂದು ಸಂಸ್ಥೆಯ ಪ್ರಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News