ನಾಳೆ ಮತದಾನ: ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

Update: 2023-05-09 07:17 GMT

ಬೆಂಗಳೂರು, ಮೇ 9: ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ(ಮೇ 10) ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ 

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್,'11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಇಲ್ಲಿನ ಪೊಲೀಸ್ ಸಿಬ್ಬಂದಿಯ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪೆನಿಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ, ಆಯುಕ್ತರ ವ್ಯಾಪ್ತಿ ಹಾಗೂ ಜಿಲ್ಲಾ ಕೇಂದ್ರ ವ್ಯಾಪ್ತಿಯ ಜವಾಬ್ದಾರಿಯನ್ನು ಎಸ್ಪಿಗಳಿಗೆ ನೀಡಲಾಗಿದ್ದು, ಚುನಾವಣಾ ನಿಗಾವಹಿಸಲಿದ್ದಾರೆ. ಅದೇ ರೀತಿ, ಚುನಾವಣಾಭದ್ರತೆಗೆ 304 ಡಿವೈಎಸ್ಪಿಗಳು, 991 ಇನ್ಸ್‍ಪೆಕ್ಟರ್ ಗಳು, 2610 ಮಂದಿ ಸಬ್ ಇನ್ಸ್ ಪೆಕ್ಟರ್ ಗಳು, 5803 ಎಎಸ್ಸೈಗಳು 46,421 ಮುಖ್ಯಪೇದೆಗಳು, 27,990 ಮಂದಿಹೋಮ್ ಗಾರ್ಡ್‍ಗಳು ಸೇರಿದಂತೆ84,119 ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ' ಎಂದು ತಿಳಿಸಿದ್ದಾರೆ. 

ಹಾಗೇ, 8,500 ಪೊಲೀಸ್ ಅಧಿಕಾರಿ ಸಿಬ್ಬಂದಿಹಾಗೂ ಗೃಹ ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಇದರ ಜೊತೆಗೆ 650 ಸಿಎಪಿಎಫ್ ಕಂಪೆನಿಗಳು, ರಾಜ್ಯ ಸಶಸ್ತ್ರ ಮಿಸಲು ಪಡೆಯನ್ನು ನಿಯೋಜಿಸಲಾಗಿದೆ. ಚುನಾವಣೆಗೆ 2930 ಸೆಕ್ಟರ್ ಮೊಬೈಲ್‍ಗಳು ಕಾರ್ಯಾಚರಣೆಯಲ್ಲಿದ್ದು, ಒಂದೊಂದು ಸೆಕ್ಟರ್‍ಗೆ 20 ಬೂತ್‍ಗಳನ್ನು ನಿಗದಿ ಪಡಿಸಲಾಗಿದೆ. ಪಿಎಸ್‍ಐಎಎಸ್‍ಐ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿರಂತರ ಗಸ್ತುಗೆ ಮೀಸಲಿರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. 

ಅಂತರ್ ರಾಜ್ಯ, ಅಂತರ್ ಗಡಿಭಾಗಗಳಲ್ಲಿ 700ಕ್ಕೂ ಹೆಚ್ಚು ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ 5500 ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Similar News