×
Ad

ದಿಲ್ಲಿ: ಸೇನಾ ನೆಲೆಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವೈದ್ಯಕೀಯ ಉಪಕರಣಕ್ಕೆ ಹಾನಿ

Update: 2023-05-09 10:35 IST

ಹೊಸದಿಲ್ಲಿ: ದಿಲ್ಲಿಯ ಕಂಟೋನ್ಮೆಂಟ್‌ ಪ್ರದೇಶದ ಸೇನಾ ನೆಲೆಯ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಪ್ರಕಾರ, ಬೆಳಗಿನ ಜಾವ 3.50ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿಯ ಸ್ವೀಕೃತಿಯ ನಂತರ ಬೆಂಕಿಯನ್ನು ನಿಯಂತ್ರಿಸಲು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ಒದಗಿಸಲಾಯಿತು.

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ದಿಲ್ಲಿ ಕಂಟೋನ್ಮೆಂಟ್ ಪ್ರದೇಶದಲ್ಲಿನ ಸೇನಾ ನೆಲೆಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಬೆಂಕಿಯಲ್ಲಿ ವೈದ್ಯಕೀಯ ಉಪಕರಣಗಳು ಹಾನಿಗೊಳಗಾಗಿವೆ, ಇದುವರೆಗೆ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

Similar News