×
Ad

ಶಿರ್ವ | ಟೆಂಪೊ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2023-05-09 10:56 IST

ಉಡುಪಿ, ಮೇ 9: ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕಟಪಾಡಿ ಸಮೀಪದ ಸುಭಾಷ್‌ ನಗರ ರೈಲ್ವೆ ಸೇತುವೆ ಬಳಿ ನಡೆದಿದೆ.

ಮೃತರನ್ನು ಬೈಕ್ ಸವಾರ ಶ್ರೀನಿವಾಸ ರಾವ್(50) ಎಂದು ಗುರುತಿಸಲಾಗಿದೆ. ಕಟಪಾಡಿ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಟೆಂಪೊ ಎದುರಿನಿಂದ ಅಂದರೆ ಶಂಕರಪುರ ಕಡೆಯಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಶ್ರೀನಿವಾಸ ರಾವ್ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News